ಮೆಸ್ಕಾಂನಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಆಚರಣೆ
Saturday, November 21, 2026
ಮಂಗಳೂರು: ರಾಷ್ಟ್ರೀಯ ಐಕ್ಯತಾ ಸಪ್ತಾಹ ಅಂಗವಾಗಿ ಐಕ್ಯತಾ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮೆಸ್ಕಾಂ, ಕಾರ್ಪೊರೇಟ್ ಕಚೇರಿಯಲ್ಲಿ ನ.19 ರಂದು ನಡೆಯಿತು.
ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ನೋಂಗ್ಜಾಯ್ ಮೊಹಮದ್ ಅಲಿ ಅಕ್ರಮ್ ಶಾ, ತಾಂತ್ರಿಕ ನಿರ್ದೇಶಕ ಹರೀಶ್ ಕುಮಾರ್. ವಿ., ಮುಖ್ಯ ಆರ್ಥಿಕ ಅಧಿಕಾರಿ ಮುರಳೀಧರ ನಾಯಕ್ ಹಾಗೂ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮೆಸ್ಕಾಂ ಸಾರ್ವಜನಿಕ ಸಂಪರ್ಕ ಅಧಿಕಾರಿ ವಸಂತ ಶೆಟ್ಟಿ ಅವರು ಪ್ರಮಾಣ ವಚನ ವಿಧಿ ನಿರ್ವಹಿಸಿದರು.