ಮುಖ್ಯ ಸಚೇತರಕಾಗಿ ಮಂಜುನಾಥ ಭಂಡಾರಿ
Saturday, November 21, 2026
ಮಂಗಳೂರು: ಕರ್ನಾಟಕ ವಿಧಾನ ಪರಿಷತ್ನ ಮುಖ್ಯ ಸಚೇತಕರಾಗಿ ಶಾಸಕ ಮಂಜುನಾಥ ಭಂಡಾರಿ ಅವರನ್ನು ನೇಮಕ ಮಾಡಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು ನೇಮಕಾತಿ ಕುರಿತು ಆದೇಶ ಹೊರಡಿಸಿದ್ದಾರೆ.
ಎಂ.ಎ., ಎಂ.ಫಿಲ್., ಪಿ.ಹೆಚ್.ಡಿ. ವಿದ್ಯಾರ್ಹತೆ ಹೊಂದಿರುವ ಅವರು ಕೃಷಿ, ಶಿಕ್ಷಣತಜ್ಞ, ಉದ್ಯಮಿ ಮತ್ತು ರಾಜಕಾರಣಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಹ್ಯಾದ್ರಿ ಕಾಲೇಜಿನ ಸ್ಥಾಪಕರಾಗಿ ಭಂಡಾರಿ ಫೌಂಡೇಶನ್ ಮುನ್ನಡೆಸುತ್ತಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿರುವ ಭಂಡಾರಿ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸದಸ್ಯರಾಗಿ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.