ಆಳ್ವಾಸ್ ಯುವಸಿರಿ ಅಧ್ಯಕ್ಷರ ಆಯ್ಕೆಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ: ಜನವರಿ 9ರಂದು ವಿದ್ಯಾಗಿರಿಯಲ್ಲಿ ಸಮ್ಮೇಳನ-ಡಿಸೆಂಬರ್ ಮೊದಲ ವಾರದಲ್ಲಿ ಆಯ್ಕೆ ಸಂದರ್ಶನ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸುತ್ತಿರುವ ‘ಆಳ್ವಾಸ್ ಯುವಸಿರಿ-2027’ ವಿದ್ಯಾರ್ಥಿ ಸಾಹಿತ್ಯ ಮತ್ತು ಸಂಸ್ಕೃತಿ ಸಮ್ಮೇಳನವು ಜನವರಿ 9ರಂದು ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ನಡೆಯಲಿದೆ. ಸಮ್ಮೇಳನದ ಅಧ್ಯಕ್ಷರ ಆಯ್ಕೆಗಾಗಿ ಭಾಷಣ, ಸಾಹಿತ್ಯ ರಚನೆ ಹಾಗೂ ವಿಶಿಷ್ಟ ಕಲಾ ಸಾಧನೆಗಳಲ್ಲಿ ಪ್ರತಿಭೆ ಹೊಂದಿರುವ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲಾ ವ್ಯಾಪ್ತಿಯಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಆಸಕ್ತರು ತಮ್ಮ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ ಪತ್ರ, ಸ್ವಪರಿಚಯ, ಪ್ರಮಾಣಪತ್ರಗಳು ಹಾಗೂ ಸಂಪರ್ಕ ಸಂಖ್ಯೆಯೊಂದಿಗೆ ನವೆಂಬರ್ 25ರೊಳಗೆ ಅರ್ಜಿ ಸಲ್ಲಿಸಬೇಕು.
ಡಿಸೆಂಬರ್ ಮೊದಲ ವಾರದಲ್ಲಿ ವಿದ್ಯಾಗಿರಿಯ ಆವರಣದಲ್ಲಿ ಆಯ್ಕೆ ಸಂದರ್ಶನ ನಡೆಯಲಿದ್ದು, ಆಯ್ಕೆ ಪ್ರಕ್ರಿಯೆಯಲ್ಲಿ ಬರಹ, ಆಶುಭಾಷಣ ಹಾಗೂ ಸಂದರ್ಶನ ಇರಲಿದೆ. ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಯುವಸಿರಿಯ ಅಧ್ಯಕ್ಷತೆ ವಹಿಸುವುದರ ಜತೆಗೆ ಯುವ ಉಪನ್ಯಾಸ, ಕವನ ವಾಚನ ಹಾಗೂ ಕಲಾ ಅಭಿವ್ಯಕ್ತಿಗೆ ಅವಕಾಶ ನೀಡಲಾಗುವುದು.
ಆಸಕ್ತ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ‘ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆ – 574227, ದಕ್ಷಿಣ ಕನ್ನಡ’ ಈ ವಿಳಾಸಕ್ಕೆ ಅಥವಾ info@alvas.org ಇಮೇಲ್ ವಿಳಾಸಕ್ಕೆ ಕಳುಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ 9845714371 ಅಥವಾ 8310445081 ಸಂಖ್ಯೆಯನ್ನು ಸಂಪರ್ಕಿಸಬಹುದು.