ಮೂಡುಬಿದಿರೆ ರೋಟರಿ ಶಾಲೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆ

ಮೂಡುಬಿದಿರೆ ರೋಟರಿ ಶಾಲೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆ


ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ಹಾಗೂ ಜ್ಯೋತಿನಗರದ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆ ನ.12ರಂದು ರೋಟರಿ ಶಾಲೆಯ ಅಟಲ್ ಟಿಂಕರಿಂಗ್ ಲ್ಯಾಬ್ ಸಭಾಂಗಣದಲ್ಲಿ ನಡೆಯಿತು.

"ಸುಸ್ಥಿರ ಭವಿಷ್ಯಕ್ಕಾಗಿ ವಿಜ್ಞಾನ" ಧ್ಯೇಯವಾಕ್ಯದಡಿ ನಡೆದ ಸ್ಪರ್ಧೆಯಲ್ಲಿ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆ, ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆ, ಸರ್ಕಾರಿ ಪ್ರೌಢಶಾಲೆ ಹೊಸಬೆಟ್ಟು, ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಕಲ್ಲಬೆಟ್ಟು, ಕೆಪಿಎಸ್ ಮಿಜಾರು, ಮರಿಯಂ ನಿಕೇತನ ಬೆಳುವಾಯಿ ಹಾಗೂ ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪರಿಸರ ಸಂರಕ್ಷಣೆ, ನವೀಕರಿಸಬಹುದಾದ ಇಂಧನ, ರೊಬೊಟಿಕ್ಸ್ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದ ಮಾದರಿಗಳನ್ನು ಪ್ರದರ್ಶಿಸಿದರು.

ರೋಟರಿ ವಿದ್ಯಾಸಂಸ್ಥೆಗಳ ಖಜಾಂಚಿ ರೋ ನಾಗರಾಜ್ ಬಿ. ಡಿಜಿಟಲ್ ದೀಪ ಬೆಳಗಿಸಿ ಸ್ಪರ್ಧೆಗೆ ಚಾಲನೆ ನೀಡಿ, ವಿದ್ಯಾರ್ಥಿಗಳು ವಿಜ್ಞಾನದಲ್ಲಿ ಆಸಕ್ತಿ ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ತೀರ್ಪುಗಾರರಾಗಿ ಕಾರ್ಕಳ ಬೈಲೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಶಿಕ್ಷಕ ಶರೀಫ್, ಅಂಗರಗುಂಡಿ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಸುಬ್ರಹ್ಮಣ್ಯ ಹಾಗೂ ಜೈನ್ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಹರೀಶ್ ಆಚಾರ್ ಮಾದರಿಗಳನ್ನು ಮೌಲ್ಯಮಾಪನ ಮಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹಾಗೂ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರಿತೇಶ್ ಶೆಟ್ಟಿ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ವೈಯಕ್ತಿಕ ವಿಭಾಗದಲ್ಲಿ ಎಕ್ಸಲೆಂಟ್ ಶಾಲೆಯ ನಿಹಾನ್ ಪ್ರಥಮ, ರೋಟರಿ ಶಾಲೆಯ ಇಫ್ರಾ ಫಾತಿಮಾ ದ್ವಿತೀಯ ಹಾಗೂ ಆಳ್ವಾಸ್ ಶಾಲೆಯ ಮುಸ್ಕಾನ್ ಹಾಜಿಮಲಂಗ್ ಡಾಂಗೆ ತೃತೀಯ ಸ್ಥಾನ ಪಡೆದರು.

ಗುಂಪು ವಿಭಾಗದಲ್ಲಿ ಎಕ್ಸಲೆಂಟ್ ಶಾಲೆಯ ತೃಪ್ತಿ ಪೂಜಾರಿ ಮತ್ತು ತನ್ವಿ ಪೂಜಾರಿ ಪ್ರಥಮ, ಹೊಸಬೆಟ್ಟು ಸರ್ಕಾರಿ ಪ್ರೌಢಶಾಲೆಯ ಸಮೀಕ್ಷಾ ಮತ್ತು ಶಾನ್ವಿ ದ್ವಿತೀಯ ಹಾಗೂ ಮೌಂಟ್ ಕಾರ್ಮೆಲ್ ಶಾಲೆಯ ವೈಭವ್ ಪಿ. ಅಮೀನ್ ಮತ್ತು ವಿಯಾನ್ ಪೆರಿಸ್ ತೃತೀಯ ಸ್ಥಾನ ಗಳಿಸಿದರು.

ಸಮಾರೋಪ ಸಮಾರಂಭದಲ್ಲಿ ವಿಜೇತರು ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ಮುಖ್ಯೋಪಾಧ್ಯಾಯರಾದ ತಿಲಕಾ ಅನಂತವೀರ್ ಜೈನ್ ಸ್ವಾಗತಿಸಿದರು. ವಿಜ್ಞಾನ ಶಿಕ್ಷಕಿ ದೀಪಿಕಾ ಪ್ರಶಸ್ತಿ ಪತ್ರ ವಾಚಿಸಿದರು. ರೇಖಾ ವೆಂಕಟೇಶ್ ನಿರೂಪಿಸಿ, ನಾರಾಯಣಿ ಭಟ್ ವಂದಿಸಿದರು. ವಿಜ್ಞಾನ ಶಿಕ್ಷಕರು ಸಹಕರಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article