ಶ್ರೀ ದುರ್ಗಾದೇವಿ ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

ಶ್ರೀ ದುರ್ಗಾದೇವಿ ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ


ನಿಡ್ಡೋಡಿ: ಇಲ್ಲಿನ ಶ್ರೀ ದುರ್ಗಾದೇವಿ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆ ಹಾಗೂ ಯಶಸ್ವಿಯಾಗಿ ಆಚರಿಸಲಾಯಿತು.

​ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಭಾಸ್ಕರ ದೇವಸ್ಯ ಅವರು ಮಾತನಾಡಿ, ಮಕ್ಕಳ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ ಶುಭ ಹಾರೈಸಿದರು.

​ವಿಶೇಷ ಅತಿಥಿಯಾಗಿ ಆಗಮಿಸಿದ್ದ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ನೇತ್ರಾ ಕೆ. ಅವರು, ಶಾಲಾ ಜೀವನದ ನಂತರದ ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡು ಮಾರ್ಗದರ್ಶನ ನೀಡಿದರು.

​ಶಾಲೆಯ ಮುಖ್ಯೋಪಾಧ್ಯಾಯಿನಿ ಸೀಮಾ ಅವರು ತಮ್ಮ ಭಾಷಣದಲ್ಲಿ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಶುಭಾಶಯಗಳನ್ನು ಕೋರಿ, ಜೀವನಕ್ಕೆ ಪೂರಕವಾದ ಮೌಲ್ಯಯುತ ವಿಚಾರಗಳನ್ನು ತಿಳಿಸಿದರು. ಇದೇ ಸಂದರ್ಭದಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗಾಗಿ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿ ರಂಜಿಸಿದರು.

​ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಸಾಗರ್, ಪ್ರಾಂಶುಪಾಲೆ ಅನುರಾಧಾ ಎಸ್. ಸಾಲ್ಯಾನ್, ಸಹ ಮುಖ್ಯೋಪಾಧ್ಯಾಯಿನಿ ಜಯಶ್ರೀ ಹಾಗೂ ವಿದ್ಯಾರ್ಥಿ ನಾಯಕ (SPL) ಮಾಸ್ಟರ್ ದಿಶಾನ್ ಎಚ್. ಶೆಟ್ಟಿಗಾರ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article