BREAKING
ದಕ್ಷಿಣ ಕನ್ನಡ

ಮೂಡುಬಿದಿರೆ ಮೈನ್ ಶಾಲೆಯಲ್ಲಿ ವಾಷಿ೯ಕೋತ್ಸವ: ವಿದ್ಯಾಥಿ೯ಗಳಿಂದ ಸಾಂಸ್ಕೃತಿಕ ಕಾಯ೯ಕ್ರಮ


ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮೂಡುಬಿದಿರೆ ಮೈನ್ ಇದರ 2026-27ನೇ ಸಾಲಿನ ಶಾಲಾ ವಾರ್ಷಿಕೋತ್ಸವವು  ವಿಜೃಂಭಣೆಯಿಂದ ಜರುಗಿತು. 


ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ  ಜಯಂತ್ ಅಂಚನ್ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. 

ಮುಖ್ಯ ಅತಿಥಿಗಳಾಗಿ ಚೌಟರ ಅರಮನೆಯ  ಕುಲದೀಪ ಎಂ., ವೈದ್ಯ ಡಾ.ರಾಮದಾಸ್ ಭಟ್, ನಿವೃತ್ತ ಸಬ್ ಇನ್ಸ್ ಪೆಕ್ಟರ್ ರಾಜಾರಾಮ್ ನಾಗರಕಟ್ಟೆ, ಉದ್ಯಮಿ, ದಾನಿ ಅನೂಪ್ ರೋಡ್ರಿಗಸ್, ಮೂಡುಬಿದಿರೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಮಹೇಶ್ವರಿ ಎನ್, ಎಸ್ ಡಿ ಎಂ ಸಿ ಉಪಾಧ್ಯಕ್ಷೆ  ದಿವ್ಯ ಜಗದೀಶ್ ಉಪಸ್ಥಿತರಿದ್ದು ಬಹುಮಾನಗಳನ್ನು ವಿತರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.  

ಎಸ್.ಡಿ.ಎಮ್.ಸಿ ಸರ್ವ ಸದಸ್ಯರು ಪೋಷಕರು ಹಾಗೂ ವಿದ್ಯಾಭಿಮಾನಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಸಭಾ ಕಾರ್ಯಕ್ರಮದ ನಂತರ ಅಂಗನವಾಡಿಯ ಪುಟಾಣಿಗಳಿಂದ ಹಾಗೂ ಶಾಲೆಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. 

ಶಾಲಾ ಮುಖ್ಯ ಶಿಕ್ಷಕಿ ಜ್ಯೋತಿ ಡಿಸೋಜ ಸ್ವಾಗತಿಸಿದರು. ಸಹ ಶಿಕ್ಷಕಿ ಶ್ರೀಮತಿ ಫ್ಲೇವಿಯ ಮರೀನಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ಸವಿತಾ ವಂದಿಸಿದರು.

📢 ಡೈಲಿ ಪಲ್ಸ್ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!