ಮೂಡುಬಿದಿರೆ: ಪ.ಪೂ. ವಿದ್ಯಾಥಿ೯ಗಳ ತಾಲೂಕು ಮಟ್ಟದ ಕ್ರೀಡಾಕೂಟ

ಮೂಡುಬಿದಿರೆ: ಪ.ಪೂ. ವಿದ್ಯಾಥಿ೯ಗಳ ತಾಲೂಕು ಮಟ್ಟದ ಕ್ರೀಡಾಕೂಟ


ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಹಾಗೂ ಸ್ವಸ್ತಿ ಶ್ರೀ ಜೈನ ವಸತಿ ಪದಪೂರ್ವ ಕಾಲೇಜು ಧವಳತ್ರಯ ಜೈನ ಕಾಶಿ ಟ್ರಸ್ಟ್ (ರಿ) ಜೈನ ಮಠ ಮೂಡುಬಿದಿರೆ ಇವುಗಳ ಸಂಯುಕ್ತ ಆಶಯದಲ್ಲಿ ಮೂಡುಬಿದಿರೆ ಪದವಿ ಪೂರ್ವ ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟವು  ಸ್ವರಾಜ್ ಮೈದಾನದ ಕ್ರೀಡಾಂಗಣದಲ್ಲಿ ಸೋಮವಾರ ನಡೆಯಿತು. 

ಶ್ರೀ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾ ಚಾರ್ಯವಯ೯ಮಹಾಸ್ವಾಮೀಜಿ   ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಕ್ರೀಡೆ ಎಂಬುದು ಮಕ್ಕಳಲ್ಲಿ ಸ್ಪೂರ್ತಿ ಮತ್ತು ಚೈತನ್ಯವನ್ನು ತುಂಬಬೇಕು ಕ್ರೀಡೆ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಹಾಗೂ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯಕಾರಿ ಎಂದರು.

ಎಂಸಿಎಸ್ ಬ್ಯಾಂಕಿನ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್ ಕ್ರೀಡಾಕೂಟವನ್ನು  ಉದ್ಘಾಟಿಸಿ ಮಾತನಾಡಿ  ಕ್ರೀಡೆ ನಮ್ಮ ದೇಶದಲ್ಲಿ ಎಷ್ಟು ಮಹತ್ವವನ್ನು ಪಡೆದುಕೊಂಡಿದೆ ಎಷ್ಟು ಕ್ರೀಡಾಪಟುಗಳು ಕ್ರೀಡೆಯಲ್ಲಿ ಸಾಧನೆಯನ್ನು ಮಾಡಿದ್ದಾರೆ ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. 

ವಕೀಲೆ ಶ್ವೇತಾ ಜೈನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. 

ಮೂಡುಬಿದಿರೆ ತಾಲೂಕು ವಿವಿಧ ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಶಿಕ್ಷಕರು,ಉಪನ್ಯಾಸಕರು ಹಾಗೂ ವಿದ್ಯಾರ್ಥಿ ಕ್ರೀಡಾಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಮೂಡುಬಿದಿರೆ ತಾಲೂಕು ಪದವಿಪೂರ್ವ ಕಾಲೇಜುಗಳ  ಕ್ರೀಡಾ ಸಂಚಾಲಕ  ನವೀನ್ ಹೆಗ್ಡೆ, ಆಳ್ವಾಸ್ ನ ನವೀನ್, ಶ್ರೀ ಗೌಡ, ಅನಂತರಾಜ್ ದೈಹಿಕ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

ಸ್ವಸ್ತಿಶ್ರೀ ಕಾಲೇಜಿನ ಉಪನ್ಯಾಸಕಿ  ಸೌಮ್ಯ ಶ್ರೀ ಸ್ವಾಗತಿಸಿದರು. ಸರಸ್ವತಿ ಕಾಯ೯ಕ್ರಮ ನಿರೂಪಿಸಿದರು. ಸುಷ್ಮಾ ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article