ಬಂಟರ ಮಹಿಳಾ ಘಟಕದ ಸಾರಥ್ಯದಲ್ಲಿ ಉಚಿತ ಆಯುಷ್ಮಾನ್ ಭಾರತ್ ಆರೋಗ್ಯ ಕಾಡ್೯ ವಿತರಣೆ
Monday, November 2, 2026
ಮೂಡುಬಿದಿರೆ: ಬಂಟರ ಸಂಘ (ರಿ.) ಮೂಡುಬಿದಿರೆ ಇದರ ಬಂಟರ ಮಹಿಳಾ ಘಟಕದ ಆಶ್ರಯದಲ್ಲಿ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಶನಿವಾರ ಸಾರ್ವಜನಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಹಾಗೂ ಹಿರಿಯ ನಾಗರಿಕರ ಗುರುತಿನ ಚೀಟಿಗಳನ್ನು ಉಚಿತವಾಗಿ ವಿತರಿಸಲಾಯಿತು.
ಬಂಟರ ಮಹಿಳಾ ಘಟಕದ ಅಧ್ಯಕ್ಷರಾದ ಶೋಭಾ ಎಸ್. ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಯ೯ಕ್ರಮದಲ್ಲಿ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಕಾರ್ಡ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.
ಅಂಚೆ ಇಲಾಖೆಯ ಪುತ್ತೂರು ವಿಭಾಗದ ಮಾರುಕಟ್ಟೆ ಅಧಿಕಾರಿ ಗುರುಪ್ರಸಾದ್ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಬಂಟರ ಸಂಘ ಮೂಡುಬಿದಿರೆಯ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ, ಕಾರ್ಯದರ್ಶಿ ಸುಚರಿತ ಶೆಟ್ಟಿ, ಕೋಶಾಧಿಕಾರಿ ಪುರುಷೋತ್ತಮ ಶೆಟ್ಟಿ, ಯುವ ಬಂಟರ ಘಟಕದ ಅಧ್ಯಕ್ಷ ಸಂದೀಪ್ ಶೆಟ್ಟಿ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.
ರವಿಪ್ರಸಾದ್ ಶೆಟ್ಟಿ ಕಾಯ೯ಕ್ರಮ ನಿರೂಪಿಸಿದರು. ರಶ್ಮಿತಾ ಶೆಟ್ಟಿ ವಂದಿಸಿದರು.