ಮಾಲಾಡಿ ಕೋರ್ಟ್–ವೆಟ್ ವೆಲ್- ಗೊಲ್ಲರಬೆಟ್ಟು-ಪೊದಾರ್ ಶಾಲೆ-ಎಮ್.ವಿ ಶೆಟ್ಟಿ ಕಾಲೇಜು ಭಾಗದ ಒಳಚರಂಡಿ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಶಾಸಕ ಡಾ. ವೈ. ಭರತ್ ಶೆಟ್ಟಿ ಸ್ಥಳ ಪರಿಶೀಲನೆ

ಮಾಲಾಡಿ ಕೋರ್ಟ್–ವೆಟ್ ವೆಲ್- ಗೊಲ್ಲರಬೆಟ್ಟು-ಪೊದಾರ್ ಶಾಲೆ-ಎಮ್.ವಿ ಶೆಟ್ಟಿ ಕಾಲೇಜು ಭಾಗದ ಒಳಚರಂಡಿ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಶಾಸಕ ಡಾ. ವೈ. ಭರತ್ ಶೆಟ್ಟಿ ಸ್ಥಳ ಪರಿಶೀಲನೆ


ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 15,16,18,23,ವ್ಯಾಪ್ತಿಯ ಮಾಲಾಡಿ ಕೋರ್ಟ್ ಮಾಲಾಡಿ ಕೋರ್ಟ್–ವೆಟ್ ವೆಲ್- ಗೊಲ್ಲರಬೆಟ್ಟು- ಪೊದಾರ್ ಶಾಲೆ-ಎಮ್.ವಿ ಶೆಟ್ಟಿ ಕಾಲೇಜು ಪರಿಸರ, ಗೊಲ್ಲರಬೆಟ್ಟು  ಸೇರಿದಂತೆ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಒಳಚರಂಡಿ ಒಳಚರಂಡಿ ಸೋರುವಿಕೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮಾನ್ಯ ಶಾಸಕರಾದ ಡಾ. ವೈ. ಭರತ್ ಶೆಟ್ಟಿಯವರು ಪಾಲಿಕೆ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಿದರು.


ಈ ಭಾಗಗಳಲ್ಲಿ ಒಳಚರಂಡಿ ಮುಖ್ಯ ಲೈನ್‌ನಿಂದ ಆಗುತ್ತಿರುವ ಸೋರಿಕೆ ಹಾಗೂ ಸಮರ್ಪಕ ನಿರ್ವಹಣೆಯ ಕೊರತೆಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳನ್ನು ಶಾಸಕರು ಖುದ್ದಾಗಿ ಪರಿಶೀಲಿಸಿ, ಸಮಸ್ಯೆಯ ಪರಿಹಾರಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪಾಲಿಕೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಂಜಿನಿಯರ್‌ಗಳೊಂದಿಗೆ ಚರ್ಚೆ ನಡೆಸಿದರು.


ಈಗಾಗಲೇ ಸಮಸ್ಯೆಯ ಗಂಭೀರತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಿರುವ ಶಾಸಕರು, ನಗರಾಭಿವೃದ್ಧಿ ಸಚಿವರಿಗೂ ಈ ಕುರಿತು ಮಾಹಿತಿ ನೀಡಿ, ತುರ್ತಾಗಿ ಪರಿಹಾರ ಕಾಮಗಾರಿ ಕೈಗೊಳ್ಳಲು ಅಗತ್ಯ ಕ್ರಮ ಜರುಗಿಸುವಂತೆ ಹಾಗೂ ಕಾಮಗಾರಿಗೆ ಬೇಕಾದ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದರು.


ಕ್ಷೇತ್ರದ ಜನರು ಎದುರಿಸುತ್ತಿರುವ ಇಂತಹ ಮೂಲಭೂತ ಸಮಸ್ಯೆಗಳಿಗೆ ಆದ್ಯತೆ ನೀಡಿ ಪರಿಹಾರ ಒದಗಿಸುವುದು ತಮ್ಮ ಬದ್ಧತೆಯಾಗಿದ್ದು, ಮಂಗಳೂರು ಉತ್ತರ ಕ್ಷೇತ್ರದ ಇತರೆ ಪ್ರದೇಶಗಳಲ್ಲಿಯೂ ಇಂತಹ ಒಳಚರಂಡಿ ಸಮಸ್ಯೆಗಳಿದ್ದಲ್ಲಿ ಅವುಗಳನ್ನೂ ಗುರುತಿಸಿ ಶೀಘ್ರ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು, ಇಂಜಿನಿಯರ್‌ಗಳು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ನಿಕಟಪೂರ್ವ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article