ರಾಜ್ಯ ಮಟ್ಟದ ಖೋ-ಖೋ ಪಂದ್ಯಾಟ: ಆಳ್ವಾಸ್ ಬಾಲಕಿಯರು ಚಾಂಪಿಯನ್

ರಾಜ್ಯ ಮಟ್ಟದ ಖೋ-ಖೋ ಪಂದ್ಯಾಟ: ಆಳ್ವಾಸ್ ಬಾಲಕಿಯರು ಚಾಂಪಿಯನ್


ಮೂಡುಬಿದಿರೆ: ಪದವಿಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಬಾಲಕಿಯರ ಖೋ-ಖೋ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ಬೆಂಗಳೂರು ಕೇಂದ್ರ ಶೈಕ್ಷಣಿಕ ಜಿಲ್ಲೆ ಹಾಗೂ ಸಿಆರ್‌ಆರ್ ಪದವಿಪೂರ್ವ ಕಾಲೇಜು, ದೊಡ್ಡಕನ್ನಲ್ಲಿ, ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ಪಂದ್ಯಾವಳಿ ನಡೆಯಿತು.

ಫೈನಲ್‌ನಲ್ಲಿ ಆಳ್ವಾಸ್ ತಂಡವು ಮಂಡ್ಯ ಜಿಲ್ಲೆಯನ್ನು ಸೋಲಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿತು. ವೈಯಕ್ತಿಕ ವಿಭಾಗದಲ್ಲಿ ಆಳ್ವಾಸ್‌ನ ಲಾವಣ್ಯ ಉತ್ತಮ ಹಿಡಿತಗಾರ್ತಿ ಹಾಗೂ ವಿಜಯಲಕ್ಷ್ಮಿ ಉತ್ತಮ ಓಟಗಾರ್ತಿ ಪ್ರಶಸ್ತಿ ಪಡೆದರು.

ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article