ಹಾಲಿನ ಬೆಲೆ ಏರಿಕೆಯಿಂದ ಜನರಿಗೆ ಬರೆ: ದಿನೇಶ್ ಪುತ್ರನ್

ಹಾಲಿನ ಬೆಲೆ ಏರಿಕೆಯಿಂದ ಜನರಿಗೆ ಬರೆ: ದಿನೇಶ್ ಪುತ್ರನ್


ಮೂಡುಬಿದಿರೆ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವು ಪಂಚಾಯತ್ ಗಳಿಗೆ ಅನುದಾನ ನೀಡುವಲ್ಲಿ ವಿಫಲವಾಗಿರುವುದರಿಂದ ಅಭಿವೃದ್ಧಿ ಕುಂಠಿತಗೊಂಡಿದೆ. ಅಗತ್ಯ ಪದಾರ್ಥಗಳ ಬೆಲೆ ಏರಿಕೆ ನಡೆಸಿ ಜನ ಸಾಮಾನ್ಯರನ್ನು ಅತಂತ್ರಗೊಳಿಸಿದೆ ಹಾಗೂ ಅಗತ್ಯ ಆಹಾರ ಹಾಲಿನ ಬೆಲೆಯನ್ನು ವಿಪರೀತ ಏರಿಸಿ ಬರೆ ಎಳೆದಿದೆ ಎಂದು ಬಿಜೆಪಿ ಮುಲ್ಕಿ-ಮೂಡುಬಿದಿರೆ ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್ ಆಕ್ರೋಶ ವ್ಯಕ್ತ ಪಡಿಸಿದರು. 

ಅವರು ಭಾರತೀಯ ಜನತಾ ಪಾರ್ಟಿಯ ನೇತೃತ್ವದಲ್ಲಿ ನೆಲ್ಲಿಕಾರು ಗ್ರಾಮ ಪಂಚಾಯತ್ ಕಚೇರಿಯ ಮುಂಭಾಗದಲ್ಲಿ   ಕಾಂಗ್ರೆಸ್  ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುನಿಲ್ ಆಳ್ವ, ಪ್ರತಿಭಟನೆಯ ಪ್ರಮುಖರಾದ ಈಶ್ವರ ಕಟೀಲ್, ಮುಖಂಡರಾದ ರವೀಂದ್ರ ಶೆಟ್ಟಿ, ಒಬಿಸಿ ಮೋರ್ಚಾ ಅಧ್ಯಕ್ಷ ಪ್ರದೀಪ ಕುಮಾರ್, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸೋಮನಾಥ ಕೋಟ್ಯಾನ್,  ಅಶ್ವತ್ಥ್ ಪಣಪಿಲ, ಪಂಚಾಯತ್ ನ ಮಾಜಿ ಅಧ್ಯಕ್ಷ ಜಯಂತ್ ಹೆಗ್ಡೆ ಸದಸ್ಯರು, ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article