ಸಂತ ಫಿಲೋಮಿನಾ ಪ.ಪೂ. ಕಾಲೇಜಿಗೆ ‘ವರ್ಣಿಕಾ-2026 ಅಂತರ್ ಕಾಲೇಜು ಮಟ್ಟದ ಫೆಸ್ಟ್’ನಲ್ಲಿ ಹಲವು ಪ್ರಶಸ್ತಿ
Friday, November 6, 2026
ಪುತ್ತೂರು: ಇಲ್ಲಿನ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ನ.4 ರಂದು ನಡೆದ ‘ವರ್ಣಿಕಾ-2026 ಅಂತರ್ ಕಾಲೇಜು ಮಟ್ಟದ ಪೆಸ್ಟ್‌ನಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ತುಳು ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಕಲಾ ವಿಭಾಗದ ಧೃತಿ ಯು. ರೈ ಪ್ರಥಮ, ಕನ್ನಡ ಕಥಾ ಬರಹ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಅವನಿ ತೃತೀಯ ಹಾಗೂ ಹಿಂದಿ ಕಾವ್ಯ ರಚನಾ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ದಿಶಾ ಎಸ್. ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಅತ್ಯುತ್ತಮ ಶಿಸ್ತು ಬದ್ಧ ವಿದ್ಯಾರ್ಥಿಗಳ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.