ಸಂತ ಫಿಲೋಮಿನಾ ಪ.ಪೂ. ಕಾಲೇಜಿಗೆ ‘ಡ್ರೀಮ್ಸ್-2026’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಪ್ರಶಸ್ತಿ
Tuesday, November 3, 2026
ಪುತ್ತೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು ಇದರ ಆಶ್ರಯದಲ್ಲಿ ಅ.29 ರಂದು ನಡೆದ ‘ಡ್ರೀಮ್ಸ್-2026’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಸೃಜನಾ ಪಿ.ಸಿ. ಅವರು ವೈಯಕ್ತಿಕ ಹಾಡುಗಾರಿಕೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿದ್ದಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ಅವರನ್ನು ಅಭಿನಂದಿಸಿದ್ದಾರೆ. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.