ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಕೊನೆಯ ದಿನ ವಿವೇಕಾನಂದ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ಅಮೋಘ ಸಾಧನೆ
ವಿದ್ಯಾಭಾರತಿಯ ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಿದ್ದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು 6 ಚಿನ್ನ, 1 ಬೆಳ್ಳಿ ಹಾಗೂ 2 ಕಂಚು ಸೇರಿದಂತೆ ಒಟ್ಟು 9 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಹಿಂದೆ ನಡೆದ ಸ್ಪರ್ಧೆಗಳಲ್ಲಿ 100 ಮೀಟರ್ ಓಟದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ ಹಾಗೂ ಎತ್ತರ ಜಿಗಿತದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಮೋಕ್ಷಿತ್ ಚಿನ್ನದ ಪದಕ ಗಳಿಸಿದ್ದರು.
ಕೊನೆಯ ದಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಗುಣಶ್ರೀ ಅವರು 100 ಮೀಟರ್ ಹರ್ಡಲ್ಸ್ ಓಟದಲ್ಲಿ ಚಿನ್ನದ ಪದಕ, 400 ಮೀಟರ್ ಹರ್ಡಲ್ಸ್ ಓಟದಲ್ಲಿ ಕಂಚಿನ ಪದಕ ಹಾಗೂ 400*100 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ (ಇವರು ದೇವುಮೂಲೆ ನಿವಾಸಿಗಳಾದ ಶ್ರೀನಿವಾಸ ನಾಯ್ಕ್ ಮತ್ತು ಹೇಮಾವತಿ ದಂಪತಿಯ ಪುತ್ರಿ).
ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ದಿವಿಜ್ಞಾ ಅವರು 200 ಮೀಟರ್ ಓಟದಲ್ಲಿ ಚಿನ್ನದ ಪದಕ, 400 ಮೀಟರ್ ಓಟದಲ್ಲಿ ಬೆಳ್ಳಿಯ ಪದಕ ಹಾಗೂ 400*100 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ (ಇವರು ಮಲಾರ್ ನಿವಾಸಿಗಳಾದ ಶಿವಪ್ರಸಾದ್ ಯು.ಎ. ಮತ್ತು ಪವಿತ್ರ ದಂಪತಿಯ ಪುತ್ರಿ).
ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಪ್ರತೀಕ್ಷಾ ಅವರು 400X100 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ (ಇವರು ಮೂಡಂಬೈಲ್ ನಿವಾಸಿಗಳಾದ ಎಮ್ ಬಾಲಕೃಷ್ಣ ಹಾಗೂ ಶಶಿಕಲಾ ದಂಪತಿಯ ಪುತ್ರಿ).
ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಡಿಂಪಲ್ ಶೆಟ್ಟಿ ಅವರು 400X100 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಹಾಗೂ 200 ಮೀಟರ್ ಓಟದಲ್ಲಿ ಕಂಚಿನ ಪದಕ ಗಳಿಸಿದ್ದಾರೆ. (ಇವರು ಮೇರ್ಲ ನಿವಾಸಿಗಳಾದ ಎ. ಉದಯ ಶೆಟ್ಟಿ ಮತ್ತು ಸುನಿತಾ ಯು. ಶೆಟ್ಟಿ ದಂಪತಿಯ ಪುತ್ರಿ).
ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಹಾಗೂ ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.