ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ವಿವೇಕಾನಂದ ಪ.ಪೂ. ಕಾಲೇಜಿನ ಮೋಕ್ಷಿತ್‌ಗೆ ಚಿನ್ನದ ಪದಕ

ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ವಿವೇಕಾನಂದ ಪ.ಪೂ. ಕಾಲೇಜಿನ ಮೋಕ್ಷಿತ್‌ಗೆ ಚಿನ್ನದ ಪದಕ


ಪುತ್ತೂರು: ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ನಡೆದ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಮೋಕ್ಷಿತ್ ಅವರು ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.


ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಹಾಗೂ ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರು ಕೆಮ್ಮಾಯಿಯ ನಾಗರಾಜ್ ಗೌಡ ಕೆ. ಹಾಗೂ ಶೋಭಾ ದಂಪತಿಯ ಪುತ್ರ.

ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article