ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
Saturday, November 21, 2026
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ.20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕಿ ವಂದನ ಶಂಕರ್ ಮಾತನಾಡಿ, ಪಿಯುಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್‌ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.
ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ.ಜಿ., ನಿರಂಜನ್ ಜಿ.ಯು., ಕವಿತಾ ಕೆ. ಹಾಗೂ ಕಾಲೇಜಿನ ಬೋಧಕ/ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥನೆ ನೆರವೇರಿಸಿದರು. ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.
