ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ.27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.
ನ.27 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕಡಬ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ರೆ. ಫಾ. ಸುನಿಲ್ ಪಿಂಟೋ ವಹಿಸಲಿದ್ದಾರೆ. ನ.28 ರಂದು ಕಾಲೇಜಿನ ವಾರ್ಷಿಕೋತ್ಸವವು ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮಂಗಳೂರು ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗ (ಪೀಡಿಯಾಟ್ರಿಕ್ಸ್)ನ ಸಹಾಯಕ ಪ್ರಾಧ್ಯಾಪಕ ಡಾ. ಪ್ರೀತಮ್ ಫಿಲಿಪ್ ತಾವ್ರೋ ವಹಿಸಲಿದ್ದಾರೆ.
ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟೋನಿ ಪ್ರಕಾಶ್ ಮೊಂತೇರೋ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಅಂಟೋನಿ ಒಲಿವೆರಾ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ಶ್ರೀಪ್ರಕಾಶ್ ಬಿ. ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ, ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಗೋವಿಂದ ಪ್ರಕಾಶ್ ಸಿ. ಎಚ್, ಕವಿತಾ ಕೆ ಹಾಗೂ ಪಿಲೋಮಿನಾ ಮೊಂತೇರೋ, ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಯಕ್ ಗುಣಿಕ ಗುರುಪ್ರಸಾದ್, ಕಾರ್ಯದರ್ಶಿ ಲಯ ತೇಜ ಎ, ಹಾಗೂ ಜೊತೆ ಕಾರ್ಯದರ್ಶಿ ಸಂದೇಶ್ ಗೌಡ ಎಸ್ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.