ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿ: ಗುರ್ಮೆ ಸುರೇಶ್ ಪಿ. ಶೆಟ್ಟಿ

ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿ: ಗುರ್ಮೆ ಸುರೇಶ್ ಪಿ. ಶೆಟ್ಟಿ


ಶಿರ್ವ: ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಲು ಕ್ರೀಡಾಚಟುವಟಿಕೆಗಳು ಪೂರಕವಾಗಿದ್ದು, ಪ್ರಾಥಮಿಕ ಶಿಕ್ಷಣದ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಆಸಕ್ತಿ ಮೂಡಿಸಬೇಕು. ಕೇವಲ ಹೆಚ್ಚು ಅಂಕಗಳನ್ನು ಗಳಿಸಲು ಮಾತ್ರ ಹೆತ್ತವರು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಒತ್ತಡ ಹೇರದೆ, ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಬೇಕು ಎಂದು ಕಾಪು ಶಾಸಕ ಹಾಗೂ ಶಿರ್ವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗುರ್ಮೆ ಸುರೇಶ್ ಪಿ. ಶೆಟ್ಟಿ ಹೇಳಿದರು.

ಅವರು ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಉಡುಪಿ ಮತ್ತು ಹಿಂದು ಪ್ರೌಢಶಾಲೆ ಶಿರ್ವ ಇವರ ಸಂಯುಕ್ತ  ಆಶ್ರಯದಲ್ಲಿ ಶಾಲಾ ಕ್ರೀಡಾಂಗಣದಲ್ಲಿ ಜರಗಿದ ‘ಕಾಪು ವೃತ್ತ ಮಟ್ಟದ ತ್ರೋಬಾಲ್ ಪಂದ್ಯಾಕೂಟ-2026’ ಇದರ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಮಟ್ಟಾರ್ ರತ್ನಾಕರ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಸಂಘದ ಆಡಳಿತಾಧಿಕಾರಿ ಪ್ರೊ. ವೈ. ಭಾಸ್ಕರ ಶೆಟ್ಟಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಶುಭ ಹಾರೈಸಿದರು.

ಉಡುಪಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವೀಂದ್ರ ನಾಯ್ಕ್, ಉಡುಪಿ ತಾಲೂಕು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಸಚ್ಚಿದಾನಂದ ಹೆಗ್ಡೆ, ಹಿಂದು ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕಿ ಶಕಿಲಾ, ಜ್ಞಾನಚೇತನಾ ಎಜ್ಯುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿ ಜಯಪ್ರಕಾಶ್ ಶೆಟ್ಟಿ, ಶಿರ್ವ ಎಂ.ಎಸ್.ಆರ್.ಎಸ್. ಕಾಲೇಜಿನ ಪ್ರಾಂಶುಪಾ ಡಾ. ಮಿಥುನ್ ಚಕ್ರವರ್ತಿ, ಕಾಪು ವೃತ್ತ ಪ್ರೌಢಶಾಲಾ ವಿಭಾಗದ ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು ಉಪಸ್ಥಿತರಿದ್ದರು.

ಹಿಂದು ಪ್ರೌಢಶಾಲೆಯ ಮುಖ್ಯಶಿಕ್ಷಕಿ ವಸಂತಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸುರೇಂದ್ರನಾಥ ಶೆಟ್ಟಿ ವಂದಿಸಿ, ಶಿಕ್ಷಕಿ ಸುಪ್ರೀತಾ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article