ಕಾರಿನ ಚಕ್ರಕ್ಕೆ ಸಿಲುಕಿ ಮಹಿಳೆ ಸಾವು

ಕಾರಿನ ಚಕ್ರಕ್ಕೆ ಸಿಲುಕಿ ಮಹಿಳೆ ಸಾವು

ಸುಳ್ಯ: ಸುಳ್ಯ ತಾಲೂಕಿನ ಕಸಬಾ ಗ್ರಾಮದ ದುಗಲಡ್ಕ ಎಂಬಲ್ಲಿ ಕಾರು ಹಿಂದಕ್ಕೆ ತೆಗೆಯುವಾಗ ಕಾರಿನ ಚಕ್ರಕ್ಕೆ ಸಿಲುಕಿ ಮಹಿಳೆ ಮೃತಪಟ್ಟ ಘಟನೆ ಬುಧವಾರ ನಡೆದಿದೆ.

ಮೃತ ಮಹಿಳೆಯನ್ನು ಕಮಾರುನ್ನಿಸಾ (46) ಎಂದು ಗುರುತಿಸಲಾಗಿದೆ.

ಕಮಾರುನ್ನಿಸಾ ಅವರು ರಬ್ಬರ್ ಮೂರ್ತೆಗೆ ತೆರಳಿ ಮನೆಗೆ ವಾಪಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಮೃತದೇಹವನ್ನು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಸುಳ್ಯ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article