ಕಲಾ ಪ್ರತಿಭೋತ್ಸವದ ಚಿತ್ರಕಲಾ ಸ್ಪರ್ಧೆಯಲ್ಲಿ ಅಜ್ಜರಕಾಡು ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರ ಸಾಧನೆ: ಜಿಲ್ಲಾ ಮಟ್ಟದಲ್ಲಿ ಬಹುಮಾನ

ಕಲಾ ಪ್ರತಿಭೋತ್ಸವದ ಚಿತ್ರಕಲಾ ಸ್ಪರ್ಧೆಯಲ್ಲಿ ಅಜ್ಜರಕಾಡು ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರ ಸಾಧನೆ: ಜಿಲ್ಲಾ ಮಟ್ಟದಲ್ಲಿ ಬಹುಮಾನ


ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಹಾಗೂ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಸಹಯೋಗದಲ್ಲಿ ಆಯೋಜಿಸಲಾಗಿದ್ದ 2026–27ನೇ ಸಾಲಿನ ಜಿಲ್ಲಾ ಮಟ್ಟದ ‘ಕಲಾ ಪ್ರತಿಭೋತ್ಸವ’ದ ಚಿತ್ರಕಲಾ ಸ್ಪರ್ಧೆಯಲ್ಲಿ ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಬಹುಮಾನ ಗಳಿಸಿದ್ದಾರೆ.


ಕಾಲೇಜಿನ ತೃತೀಯ ಬಿ.ಕಾಂ. ವಿದ್ಯಾರ್ಥಿನಿ ವೈಷ್ಣವಿ ಪ್ರಥಮ ಬಹುಮಾನ ಪಡೆದರೆ, ಪ್ರಥಮ ಎಂ.ಕಾಂ. ವಿದ್ಯಾರ್ಥಿನಿ ರಮ್ಯಾ ದ್ವಿತೀಯ ಬಹುಮಾನ ಗಳಿಸಿದ್ದಾರೆ.

ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲೆ ಪ್ರೊ. ನಿಕೇತನ, ಸಾಂಸ್ಕೃತಿಕ ಸಂಘದ ಸಂಚಾಲಕಿ ಆಶಾ ಅಭಿನಂದನೆ ಸಲ್ಲಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article