ಎಸ್‌ಡಿಎಂನಲ್ಲಿ ಮಕ್ಕಳ ಉಚಿತ ಆರೋಗ್ಯತಪಾಸಣಾ ಶಿಬಿರ
ಬಳಿಕ ಮಾತನಾಡಿದ ಅವರು, ಈ ಹಿಂದೆ ಉಜಿರೆಯ ಜನತೆ ಯಾವುದೇ ಆರೋಗ್ಯ ಸಮಸ್ಯೆ ಬಂದರೂ ದೂರದ ಮಂಗಳೂರಿಗೆ ಹೋಗಬೇಕಾಗುತ್ತಿತ್ತು. ಸುಸಜ್ಜಿತ ಆಸ್ಪತ್ರೆ ತೆರೆಯುವ ಮೂಲಕ ಇಲ್ಲಿನ ಜನತೆಗೆ ಮನೆಬಾಗಿಲಿನಲ್ಲಿಯೇ ಅತ್ಯಾಧುನಿಕ ವೈದ್ಯಕೀಯ ಸೇವೆ ಸಿಗುವಂತೆ ಮಾಡಿದ್ದಾರೆ. ಮನೆ ತುಂಬಾ ಮಕ್ಕಳಿದ್ದ ಆ ಕಾಲದಲ್ಲಿ ಮನೆಯಲ್ಲಿ ಸಂತೋಷ ತುಂಬಿರುತ್ತಿತ್ತು. ಪ್ರಸ್ತುತ ಮನೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಮಕ್ಕಳ ಆರೋಗ್ಯ ಕಾಪಾಡುವುದು ಪೋಷಕರ ಮುಖ್ಯ ಕರ್ತವ್ಯವಾಗಿದೆ. ಉಜಿರೆಯ ಈ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ತಂಡ ಉತ್ತಮ ವೈದ್ಯಕೀಯ ಸೇವೆ ನೀಡುತ್ತಿದೆ. ವ್ಯವಸ್ಥಾಪಕ ನಿರ್ದೇಶಕ ಎಂ.ಜನಾರ್ದನ್ ಉತ್ತಮ ರೀತಿಯಲ್ಲಿ ಆಸ್ಪತ್ರೆಯನ್ನು ಮುನ್ನಡೆಸುತ್ತಿರುವುದರಿಂದ ಇಲ್ಲಿ ಅತ್ಯುತ್ತಮಸೇವೆ ದೊರೆಯುತ್ತಿದೆ ಎಂದರು.
ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ.ಜನಾರ್ದನ್ ಮಾತನಾಡಿ, ನಾವು ಮಾಡುವ ಪ್ರತಿಯೊಂದು ಕೆಲಸವು ಜನರಿಗೆ ಪ್ರಯೋಜನವಾಗಬೇಕೆಂಬ ನೆಲೆಯಲ್ಲಿ ಈ ದಿನ ಮಕ್ಕಳರೋಗ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಆಸ್ಪತ್ರೆಯಲ್ಲಿ ಮಕ್ಕಳ ವಿಭಾಗದಲ್ಲಿ 2 ಮಂದಿ ಮಕ್ಕಳರೋಗ ತಜ್ಞರಿದ್ದು, ಇಲ್ಲಿನ ವೈದ್ಯರು, ಸಿಬ್ಬಂದಿಗಳು ರೋಗಿಗಳಿಗೆ ತೋರಿಸುವ ಪ್ರೀತಿ ಮತ್ತು ಕಾಳಜಿಯಿಂದಾಗಿ ಇಂದು ಎಸ್.ಡಿ.ಎಂ ಆಸ್ಪತ್ರೆ ಜನರಿಗೆ ಅತ್ಯಂತ ಹತ್ತಿರವಾಗಿದೆ. ಮಕ್ಕಳ ದಿನಾಚರಣೆಯ ಅಂಗವಾಗಿ ಆಯೋಜಿಸಲಾದ ಈ ಶಿಬಿರದಲ್ಲಿ ಮಕ್ಕಳಿಗೆ ಆಸ್ಪತ್ರೆಯ ವಾತಾವರಣದಲ್ಲಿ ಭಯದ ಅನುಭವಆಗದಿರಲಿ ಎಂಬ ಉದ್ದೇಶದಿಂದ ಮನರಂಜನೆಯ ಆಟಗಳೊಂದಿಗೆ ಆರೋಗ್ಯ ತಪಾಸಣೆಗೆ ಅವಕಾಶ ಮಾಡಲಾಗಿದೆ ಎಂದರು.
ಮಕ್ಕಳ ರೋಗತಜ್ಞ ಡಾ. ಪ್ರತೀತ್, ಡಾ. ನಿಖಿತಾ ಮಿರ್ಲೆಇವರು ಮಕ್ಕಳನ್ನು ಕಾಡುವ ಆರೋಗ್ಯ ಸಮಸ್ಯೆ ಮತ್ತುಮಕ್ಕಳ ಆರೋಗ್ಯಕಾಪಾಡುವ ಬಗ್ಗೆ ವಿವರಿಸಿದರು. ಮತ್ತು ಶಿಬಿರದಲ್ಲಿ ಮಕ್ಕಳ ವೈದ್ಯಕೀಯ ಪರೀಕ್ಷೆ ನಡೆಸಿದರು.
127 ಮಂದಿಮಕ್ಕಳು ಶಿಬಿರದ ಸದುಪಯೋಗ ಪಡೆದುಕೊಂಡರು. ಶಿಬಿರದಲ್ಲಿ ಮಕ್ಕಳ ಮನರಂಜನೆಗಾಗಿ ಕಲ್ಪಿಸಲಾದ ವ್ಯವಸ್ಥೆಗಳ ಬಗ್ಗೆ ಮಕ್ಕಳ ಹೆತ್ತವರು ಮೆಚ್ಚುಗೆ ವ್ಯಕ್ತಪಡಿಸಿದರು.ಮುಖ್ಯ ವೈದ್ಯಾಧಿಕಾರಿ ಡಾ. ಸಾತ್ವಿಕ್‌ಜೈನ್ ಉಪಸ್ಥಿತರಿದ್ದು, ಶಿಬಿರಕ್ಕೆ ಶುಭ ಹಾರೈಸಿದರು. ಮಾರ್ಕೆಟಿಂಗ್ ಮತ್ತು ಸಂಪರ್ಕಾಧಿಕಾರಿ ಭವಿಷ್ಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಸುಮಂತ್ ರೈ ಸಹಕರಿಸಿದರು.