ಉಜಿರೆ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಉಜಿರೆಯ ಅರ್ಪಿತ ಮತ್ತು ಜನಾರ್ಧನ ಪಡ್ಡಿಲ್ಲಾಯರ ಪುತ್ರಿ, ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಆರನೆಯ ತರಗತಿ ವಿದ್ಯಾರ್ಥಿನಿ ಸಮನ್ವಿತಾ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.