‘ಋತು ಚಕ್ರ ಮತ್ತು ಹದಿಹರೆಯದ ಆರೋಗ್ಯ’

‘ಋತು ಚಕ್ರ ಮತ್ತು ಹದಿಹರೆಯದ ಆರೋಗ್ಯ’


ಉಜಿರೆ: ಉಜಿರೆಯ ಶ್ರೀ ಧ ಮಂ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಮಾಜಕಾರ್ಯ ವಿಭಾಗದ ವತಿಯಿಂದ ಪುಂಜಾಲಕಟ್ಟೆಯ ಅಂಗನವಾಡಿ ಕೇಂದ್ರದಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿನಿಯರಿಗಾಗಿ ‘"ಮುಟ್ಟಿನ ಋತು ಚಕ್ರ ಮತ್ತು ಹದಿಹರೆಯದ ಆರೋಗ್ಯ’" ಕುರಿತು ಜಾಗೃತಿ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.

ಬೆಳ್ತಂಗಡಿ ತಾಲೂಕು  ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮುಟ್ಟಿನ ಆರೋಗ್ಯ, ಮುಟ್ಟಿನ ಸಮಯದಲ್ಲಿ ಪಾಲಿಸಬೇಕಾದ ಸ್ವಚ್ಛತಾ ಕ್ರಮಗಳು ಹಾಗೂ ವೈಯಕ್ತಿಕ ಶುಚಿತ್ವದ ಕುರಿತು ಮಾಹಿತಿ ನೀಡಿ, ಹದಿಹರೆಯದಲ್ಲಿ ಕಂಡುಬರುವ ದೈಹಿಕ ಬದಲಾವಣೆಗಳು ಮತ್ತು ಉತ್ತಮ ಆರೋಗ್ಯ ಅಭ್ಯಾಸಗಳ ಮಹತ್ವವನ್ನು ವಿವರಿಸಿದರು.

ಮಡಂತ್ಯಾರು ಗ್ರಾ.ಪಂ. ಮಾಜಿ ಅಧ್ಯಕ್ಷೆ ರೂಪಾ ಅಧ್ಯಕ್ಷತೆ ವಹಿಸಿ ಮಾತನಾಡಿ, ಹದಿಹರೆಯದಲ್ಲಿ ಬಾಲಕಿಯರಲ್ಲಿ ಉಂಟಾಗುವ ದೈಹಿಕ ಹಾಗೂ ಭಾವನಾತ್ಮಕ ಬದಲಾವಣೆಗಳ ಕುರಿತು ವಿವರಿಸಿ, ಮುಟ್ಟಿನ ಸಂದರ್ಭದಲ್ಲಿ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವ ಅಗತ್ಯವನ್ನು ತಿಳಿಸಿ, ಆರೋಗ್ಯದ ಬಗ್ಗೆ ಸೂಕ್ತ ಕಾಳಜಿ ವಹಿಸುವಂತೆ ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.ಇದೇ ಸಂದರ್ಭದಲ್ಲಿ ಸಮಾಜಕಾರ್ಯ ವಿದ್ಯಾರ್ಥಿಗಳಾದ ಪವಿತ್ರಾ ಮತ್ತು ನಿಶಾ  ವಿದ್ಯಾರ್ಥಿನಿಯರಿಗೆ ಮುಟ್ಟಿನ ಆರೋಗ್ಯ ಹಾಗೂ ಹದಿಹರೆಯದವರ ಆರೋಗ್ಯದ ಕುರಿತು ಮಾಹಿತಿ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆ ಉಷಾ, ಅಂಗನವಾಡಿ ಶಿಕ್ಷಕಿ ಗೀತಾ, ಅಂಗನವಾಡಿ ಸಹಾಯಕಿ ನೀಲಮ್ಮ ಹಾಗೂ ವಿದ್ಯಾರ್ಥಿನಿಯರ ಪೋಷಕರು ಉಪಸ್ಥಿತರಿದ್ದರು.

ಪ್ರಥಮ ವರ್ಷದ ಸಮಾಜಕಾರ್ಯ ಸ್ನಾತಕೋತ್ತರ ವಿದ್ಯಾರ್ಥಿನಿ ಮೌಲ್ಯ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ವಿದ್ಯಾರ್ಥಿನಿ ಅಶ್ವಿತಾ ವಂದಿಸಿದರು. ಉಜಿರೆಯ ಎಸ್.ಡಿ.ಎಂ ಸಮಾಜಕಾರ್ಯ ಸ್ನಾತಕೋತ್ತರ ವಿದ್ಯಾರ್ಥಿನಿಯರು ಕಾರ್ಯಕ್ರಮವನ್ನು ನಡೆಸಿಕೊಟ್ಟರು

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article